ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಮಣ್ಣೂರ-ಕರಜಗಿ ರಸ್ತೆಯ ಕಿರುಹಳ್ಳ ತುಂಬಿ ಹರಿಯುತ್ತಿದೆ. ನೀರಿನ ರಭಸಕ್ಕೆ ಹಳ್ಳದ ಮೇಲಿನ ಡಾಂಬರ್ ರಸ್ತೆ ಕೊಚ್ಚಿಕೊಂಡು ಹೋಗಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.