ಮೊಳಕಾಲ್ಮುರು:- ಕೊಂಡ್ಲಹಳ್ಳಿ ಗ್ರಾಮದಲ್ಲಿ ಮಹಾ ಶಕ್ತಿ ಗಣಪತಿ ವಿಸರ್ಜನಾ ಮೆರವಣಿಗೆ ಜಾನಪದ ವಾದ್ಯಗಳ ಮೂಲಕ ಅದ್ದೂರಿಯಾಗಿ ನಡೆಯಿತು. ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಪ್ರತಿವರ್ಷದಂತೆ ವಿನಾಯಕ ಸೇವಾ ಸಮಿತಿಯಿಂದ ಐದು ದಿನಗಳ ಕಾಲ ಗಣೇಶನನ್ನು ಪ್ರತಿಷ್ಠಾಪಿಸಲಾಗಿತ್ತು. ಬೆಳಗ್ಗೆ ಗಣಪತಿಗೆ ಪೂಜೆ ಸಲ್ಲಿಸಿ ಹಾಗೂ ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಬಳಿಕ ವಿವಿಧ ಬಗೆಯ ಹೂಗಳಿಂದ ಬಾಳೆ ಕಂದುಗಳಿಂದ ಅಲಂಕರಿಸಲಾಗಿದ್ದ ವಾಹನದಲ್ಲಿ ಗಣಪತಿಯನ್ನು ಕೂರಿಸಿ ಭಕ್ತರ ಜಯ ಘೋಷದ ನಡುವೆ ಮೆರವಣಿಗೆಗೆ ಚಾಲನೆ ನೀಡಲಾಯಿತು.