ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಚಗನೂರು ಗ್ರಾಮದ ಕೃಷ್ಣಾ ನದಿಯಲ್ಲಿ ಎತ್ತುಗಳನ್ನು ತೊಳೆಯಲು ಹೋದ ರೈತ ಕಾಶಪ್ಪ ಕಂಬಳಿ ಎಂಬತಾನನ್ನು ಮೊಸಳೆ ಒಂದು ಎಳೆದುಕೊಂಡು ಹೋದ ಘಟನಾ ಸ್ಥಳಕ್ಕೆ ಶನಿವಾರ ಸಾಯಂಕಾಲ 5ಗಂಟೆ ಸುಮಾರಿಗೆ ಮಾಜಿ ಶಾಸಕ ಎಸ್ ಪಾಟೀಲ್ ನಡಹಳ್ಳಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿಗಳು ಹಾಗೂ ಕೃಷ್ಣ ಜಲಾಶಯದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೃಷ್ಣ ನದಿ ದಡದಲ್ಲಿ ಜಿಲ್ಲೆಯ 42 ಗ್ರಾಮಗಳು ಬಂದರು ಸಹ ಯಾವುದೇ ಭದ್ರತೆ ಇಲ್ಲದ ಕಾರಣ ಈ ಘಟನೆ ಸಂಭವಿಸಿದೆ ಕೂಡಲೇ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದೆ. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.