ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ತಹಶೀಲ್ದಾರರು ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಹಯೋಗದಲ್ಲಿ ಸೂಕ್ತ ನಿವೇಶನವನ್ನು ಗುರುತಿಸುವಂತೆ ಜಿಲ್ಲೆಯ 5 ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಆರ್. ಚಂದ್ರಯ್ಯ ಅವರು ನಿರ್ದೇಶನ ನೀಡಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ದಿನೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.