ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ಪೊಲೀಸ್ ಠಾಣೆಯಲ್ಲಿ 11ನೇ ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ಸಾಯಂಕಾಲ 6ಗಂಟೆ ಸುಮಾರಿಗೆ ಪಟ್ಟಣದ ಗಣೇಶ ಮಹಾಮಂಡಳಿಯ ಮುಖಂಡರೊಂದಿಗೆ ಸಭೆ ನಡೆಸಿದರು. 11ನೇ ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯವಸ್ಥಿತವಾಗಿ ವಿಸರ್ಜನೆ ಮಾಡಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಗಣೇಶ ಮಂಡಳಿಯ ಪದಾಧಿಕಾರಿಗಳು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.