ನಗರದ ಶ್ರಾವಣ ಕಲ್ಯಾಣ ಮಂಟಪದಲ್ಲಿ ನಂಜನಗೂಡು ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಮತ್ತು ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪತ್ರಕರ್ತರ ಹಿತ ಕಾಯಲು ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದರು.