ಸಾಲಬಾಧೆ ತಾಳಲಾರದೇ ರೈತರೊಬ್ಬರು ಬಚ್ಚಲು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಾಯಿಕೆರೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಬ್ದುಲ್ ಗನಿಸಾಬ್ ಗೌಸುಸಾಬ್ ಜಖಾತಿ (47) ಮೃತ ದುರ್ದೈವಿ. ವಿವಿಧ ಬ್ಯಾಂಕ್ ಗಳಲ್ಲಿ ಕೃಷಿ ಕೆಲಸಕ್ಕೆಂದು 4 ಲಕ್ಷ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವಣೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.