ಮಲಾಡಿಹಳ್ಳಿ ಗ್ರಾಮದ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶನಿವಾರ ಬೆಳಗ್ಗೆ 11 ಗಂಟೆಗೆ ಮಲಾಡಿಹಳ್ಳಿ ಗ್ರಾಮದ ರಾಘವೇಂದ್ರ ಜ್ಞಾನಮಂಟಪ ಸಭಾಂಗಣದಲ್ಲಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ವಜ್ರ ಮಹೋತ್ಸವ ನಿಮಿತ್ತ ವಿಧ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮಾದಾರ ಚನ್ನಯ್ಯ ಗುರುಪಿಠದ ಬಸವ ಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದು ಇದೇ ವೇಳೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಹ ಹಮ್ಮಿಕೊಂಡಿದ್ದು ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ