ಗ್ರಾಮೀಣ ಜನರು ಸರಕಾರಿ ಸೌಲಭ್ಯಗಳನ್ನು ಹಾಗೂ ಹಲವಾರು ಆಡಳಿತಾತ್ಮಕ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಿದ್ದು, ನಾಗರೀಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಿಳಿಸಿದರು.ತಾಲೂಕಿನ ತಿಮ್ಮಂಪಲ್ಲಿಯಲ್ಲಿ ತಾಲೂಕು ಕಂದಾಯ ಇಲಾಖೆ, ತಾಲೂಕು ಪಂಚಾಯತಿಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ನಾಗರೀಕರ ಕುಂದುಕೊರತೆಗಳನ್ನು ಪರಿಹರಿಸಲು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಜನಸ್ಪಂದನಾ ಕಾರ್ಯಕ್ರದ ಮೂಲಕ ತಾಲೂಕು ಮಟ್ಟದ ನಾನಾ ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಸಮಸ್ಯೆಗಳನ್ನು ಆಲಿಸಿ,ಪರಿಹಾರೋಪಾಯಗಳನ್ನು ನೀಡಲಾಗುತ್ತದೆ ಎಂದರು.