ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ಶಿವಮೊಗ್ಗ ನಗರದ ಬಿ. ಹೆಚ್. ರಸ್ತೆಯಲ್ಲಿ ಇರುವ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಮಂಡಳಿ ಸದಸ್ಯರು , ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಸಭಾಪತಿಗಳಾದ ಡಿ ಎಚ್ ಶಂಕರಮೂರ್ತಿಯವರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್, ರಾಜ್ಯ ಬಿಜೆಪಿ ಕಾರ್ಯದರ್ಶಿವಿಧಾನಪರಿಷತ್ ಶಾಸಕರಾದ ಡಿ ಎಸ್ ಅರುಣ್, ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಹಾಗೂ ಇನ್ನಿತರ ಪ್ರಮುಖ ಉಪಸ್ಥಿತರಿದ್ದರು.