ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಉಡಮಕಲ್ಲ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ ಸೆಪ್ಟೆಂಬರ್ 03 ರಂದು ಬೆಳಗ್ಗೆ 11-00 ಗಂಟೆಗೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಕೊಪ್ಪಳ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಮಾರತಿ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ಸ್ಟೇಡ್ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಈರಣ್ಣ ಭಾಗವಹಿಸಿದ್ದರು. ಸ್ವಸಹಾಯ ಗುಂಪಿನ ಮಹಿಳೆಯರಿಗೆ ಪ್ರದಾನ ಮಂತ್ರಿ ಜೀವನ್ ಭೀಮಾ ಜೀವನ ಜ್ಯೋತಿ ಜೀವನ ಸುರಕ್ಷಾ ಮತ್ತು ಅಟೇಲ ಬಿಹಾರಿ ವಾಜಪೇಯಿ ಅವರ ಪೆನ್ಸನ್ ಯೋಜನೆಯ ಬಗ್ಗೆ ತಿಳಿವಳಿಕೆ ನೀಡಿದರು.