ನವರಾತ್ರಿ ಉತ್ಸವದ ಆಯುಧ ಪೂಜೆ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ 11:51 ಕ್ಕೆ ಪುರಸಭೆಯ ಅಧ್ಯಕ್ಷೆ ಪಾರ್ವತಿ ಶೇರಿಕಾರ್ ಅವರು ಪುರಸಭೆಯ ತ್ಯಾಜ್ಯ ವಿಲೇವಾರಿ ಸೇರಿದಂತೆ ವಿವಿಧ ವಾಹನಗಳಿಗೆ ವಿಶೇಷ ಪೂಜೆಯನ್ನ ಸಲ್ಲಿಸಿದರು. ಈ ವೇಳೆ ಪುರಸಭೆ ಮುಖ್ಯ ಅಧಿಕಾರಿ ವನಿತಾ ಚೌಹಾಣ್, ಕಿರಿಯ ಆರೋಗ್ಯ ನಿರೀಕ್ಷಕ ಸಲೀಂ, ಶ್ಯಾಮ್ದಾಸ್ ಹಾಗೂ ಪೌರ ಕಾರ್ಮಿಕರು, ವಾಹನ ಚಾಲಕರು ಹಾಜರಿದ್ದರು.