ನಗರದ ಬುದ್ಧ ವಿಹಾರದ ಮುಂಭಾಗದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿ ಪೂಜೆ ಯಾದಗಿರಿ ಜಿಲ್ಲೆಯ ಶಹಪುರ ನಗರದ ಬುದ್ಧ ವಿಹಾರದ ಮುಂಭಾಗದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪು ಭೂಮಿ ಪೂಜೆ ನೆರವೇರಿಸಿದರು. ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಿರ್ಮಾಣವಾಗುತ್ತಿದ್ದು ಗುತ್ತಿಗೆದಾರರು ಉತ್ತಮ ಸಾಮಗ್ರಿಗಳನ್ನು ಬೆಳೆಸಿ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜದ ಅನೇಕ ಜನ ಮುಖಂಡರು ಭಾಗವಹಿಸಿದ್ದರು