ಶುಕ್ರವಾರ ಸಂಜೆ 4.30ಕ್ಕೆ ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು ಧರ್ಮರಕ್ಷಣೆಗಾಗಿ ಧರ್ಮ ಯುದ್ಧ ಘೋಷಣೆಯಡಿ ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ. ಸೆ.1ರಂದು ಧರ್ಮಸ್ಥಳದಲ್ಲಿ ಲಕ್ಷಾಂತರ ಜನ ಸೇರಲಿದ್ದಾರೆ. ಜಿಲ್ಲೆಯಿಂದ 4ರಿಂದ 5 ಸಾವಿರ ಬಿಜೆಪಿ ಕಾರ್ಯಕರ್ತರು ಭಕ್ತರು ಅಲ್ಲಿಗೆ ತೆರಳಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರೂಪಾಲಿ ನಾಯ್ಕ, ಬಿಜೆಪಿ ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ ಗುನಗಿ, ಜಗದೀಶ ನಾಯಕ ಮೊಗಟಾ, ಪ್ರಶಾಂತ ನಾಯ್ಕ, ನಗರಸಭೆ ಅಧ್ಯಕ್ಷ ರವಿ ಅಂಕೋಲೇಕರ್ ಇದ್ದರು.