ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸಕೊಪ್ಪ ಬಳಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ನಡೆದಿದೆ. ಆನಂದಪುರದ ಕಡೆಯಿಂದ ಶಿಕಾರಿಪುರದ ಕಡೆ ತೆರಳುತ್ತಿದ್ದ ಕಲ್ಲಿದ್ದಲು ತುಂಬಿದ ಲಾರಿಯೊಂದು ಬಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ ಇದ್ದ ಕಂಡಕ್ಟರ್ ಮತ್ತು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.