ಬಾಗೇಪಲ್ಲಿ ತಾಲ್ಲೂಕು ಗೂಳೂರು ಹೋಬಳಿ ಹಿರಿಯ ಪ್ರಾಥಮಿಕ ಶಾಲೆ, ಇಲ್ಲಿನ ವಿವೇಕ ಶಾಲಾ ಯೋಜನೆಯಡಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ 27.80 ಲಕ್ಷ ರೂಪಾಯಿಗಳ ಅನುದಾನದಲ್ಲಿ ನಿರ್ಮಾಣಗೊಂಡ ಎರಡು ನೂತನ ತರಗತಿ ಕೊಠಡಿಗಳನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇದು 2022-23 ನೇ ಸಾಲಿನ ವಿವೇಕ ಶಾಲಾ ಕೊಠಡಿ ಯೋಜನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕಾಂಗ್ರೆಸ್ ಸರ್ಕಾರದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲವೂ ಹಂತ ಹಂತವಾಗಿ ಅನುಷ್ಠಾನಕ್ಕೆ ಬರುತ್ತಿದ್ದು ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಆಗಬೇಕು ಎಂದು ಹೇಳಿದರು.