ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕ ಪುಟ್ಟರಂಗಶೆಟ್ಟಿ ಅವರು ದೀಪ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತಾನಾಡಿ ಅನೇಕ ಹಿರಿಯ ಕ್ರೀಡಾಪಟುಗಳು ಮಾದಕ ವಸ್ತುಗಳ ಗೀಳಿಗೆ ಒಳಗಾಗಿ ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಂಡಿದ್ದಾರೆ. ಆದ್ದರಿಂದ ಯುವ ಕ್ರೀಡಾಪಟುಗಳು ಡ್ರಗ್ಸ್, ಆಫೀಮು ಸೇವನೆಯಿಂದ ದೂರ ಇರಬೇಕೆಂದರು.