ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಷ್ಟು ದಿನಗಳ ಕಾಲ ಕಾಡಾನೆ ಕಾಡುಕೋಣಗಳ ಹಾವಳಿ ಹೆಚ್ಚಾಗಿ ಜನ ಆತಂಕಕ್ಕೆ ಒಳಗಾಗಿದ್ದರೆ, ಇದೀಗ ಹೆಬ್ಬಾವಿನ ಸರದಿ ಆರಂಭವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗುಂದ ಹೋಬಳಿಯ ಗುಡ್ಡೆತೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಭೈರೇದೇವರು ಗ್ರಾಮದ ಜಾಲ್ಮರ ಕಾಫಿ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು, ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮಲೆನಾಡನ್ನು ಮೃಗಾಲಯ ಮಾಡುವ ಸಂಚು ರೂಪಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.