ಕುಮಟಾ :ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ದೀಪನ್ ಅವರು ಕುಮಟಾದಲ್ಲಿ ನಡೆಯಲಿರುವ ಸಾರ್ವಜನಿಕ ಗಣೇಶೋತ್ಸವದ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲು ಭೇಟಿ ನೀಡಿದರು. ಈ ಭೇಟಿಯ ಸಂದರ್ಭದಲ್ಲಿ, ಅವರು ಗುಡಿಗಾರಗಲ್ಲಿ ಗಣೇಶೋತ್ಸವ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿದರು. ಈ ಸಮಯದಲ್ಲಿ, ಸಮಿತಿಯ ಪದಾಧಿಕಾರಿಗಳು ಶ್ರೀ ದೇವರ ಪವಿತ್ರ ಪ್ರಸಾದವನ್ನು ನೀಡಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗೌರವ ಸಲ್ಲಿಸಿದರು.