ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಚಿನ್ನಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳಿಯನ್ನು ಚಾಮರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೀಲಾ ಬಂಧಿತ ಆರೋಪಿ. ಆಭರಣ ಖರೀದಿಸುವ ನೆಪದಲ್ಲಿ ಚಿನ್ನದಂಗಡಿಗಳಿಗೆ ಬರುತ್ತಿದ್ದ ಈಕೆ ಅಂಗಡಿಯ ಸಿಬ್ಬಂದಿಗಳ ಕಣ್ತಪ್ಪಿಸಿ ಚಿನ್ನದ ಸರ ಕದ್ದು ಎಸ್ಕೇಪ್ ಆಗುತ್ತಿದ್ದಳು. ಚಾಮರಾಜನಗರದಲ್ಲಿ ಇದೇ ರೀತಿ 9 ಗ್ರಾಂ ಚಿನ್ನ ಹಾಗೂ ಪಿರಿಯಾಪಟ್ಟಣದಲ್ಲಿ 5 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿದ್ದಳು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.