ಯಾದಗಿರಿ ಜಿಲ್ಲೆಯ ವಡಿಗೇರ ತಾಲೂಕಿನ ಕದರಾಪುರ ಗ್ರಾಮದಲ್ಲಿರುವ ಕೃಷ್ಣಾ ನದಿ ದಡದಲ್ಲಿನ ಮೀನುಗಾರರ ಕುಟುಂಬಗಳಿಗೆ ಮನೆಗಳನ್ನು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ ಸಂಘದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ನೇತ್ರತ್ವದಲ್ಲಿ ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಗುರುವಾರ ಸಂಜೆವರೆಗೆ ಧರಣಿ ನಡೆಸಲಾಯಿತು. ಧರಣಿಯಲ್ಲಿ ಸಂಘಟನೆಯ ಹಲವು ಮುಖಂಡರು ಹಾಗೂ ಮೀನುಗಾರರ ಕುಟುಂಬದ ನೂರಾರು ಜನ ಭಾಗವಹಿಸಿದ್ದರು.