ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಗುರುವಾರ ಮಧ್ಯಾನ ಅಲೆಮಾರಿ ಸಮುದಾಯಗಳ ಒಳ ಮೀಸಲಾತಿ ವಂಚಿತ ಹೋರಾಟ ಸಮಿತಿಯಿಂದ ಅಲೆಮಾರಿ ಸಮುದಾಯಕ್ಕೆ ಶೇಕಡ ಒಂದರಷ್ಟು ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹಲವು ವೇಷ ಧರಿಸಿದ ಅಲೆಮಾರಿ ಸಮುದಾಯದ ಮುಖಂಡರು ಮಾತನಾಡಿ, ಸರ್ಕಾರ ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಮೀಸಲು ಪ್ರಮಾಣವನ್ನು ಎಚ್ಚರಿಕೆಯಿಂದ ನಿಗದಿಪಡಿಸಬೇಕಿತ್ತು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಲೆಮಾರಿ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.