ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿತ್ತು. ಇಂದು ಅವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ತನಿಕಾಧಿಕಾರಿ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಅಶೋಕ್ ಮಾಳಬಗಿ ಸಹಿತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಸಮಯದಲ್ಲಿ ಬ್ರಹ್ಮಾವರ ಪೊಲೀಸರು ಕಷ್ಟಡಿಗೆ ಕೇಳಿದ್ದು ನಂತರ ನ್ಯಾಯಾಧೀಶರು ಎರಡು ಗಂಟೆಗಳ ಕಾಲ ಆದೇಶವನ್ನು ನೀಡಿ 3.40ಕ್ಕೆ ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಲು ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.