2014 ಮಾ.1 ರಂದು ಬೆಳ್ತಂಗಡಿ ಉಜಿರೆಯ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ರವರು ಆರೋಪಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನಿಗೆ 2025 ಆ.28 ರಂದು ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ: 126/2014, ಕಲಂ:302.201 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು.