ವಿಜಯಪುರ ನಗರದ ಶಿವಾಜಿ ವೃತ್ತದ ಶ್ರೀ ಗಜಾನನ ಮಹಾಮಂಡಳಿಯ ಗಣೇಶನಿಗೆ ಗುರುವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ಸಂಸದ ರಮೇಶ್ ಜಿಗಿಜಿಣಿಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಜನತೆಗೆ ಒಳ್ಳೇದಾಗಲಿ ರೈತರ ಬದುಕು ಹಸನಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ಪ್ರತಿವರ್ಷ ಗಜಾನನ ಮಹಾಮಂಡಳಿಯ ಗಣೇಶನಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಗಜಾನನ ಮಹಾಮಂಡಳಿಯ ಪದಾಧಿಕಾರಿಗಳು ವಿಶೇಷ ಪೂಜೆಯಲ್ಲಿ ಉಪಸ್ಥಿತರಿದ್ದರು