ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡುವ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಇಕೋ ಭಕ್ತಿ ಸಂಭ್ರಮ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ಪಾಟೀಲ ತಿಳಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಈ ಕಾರ್ಯಕ್ರಮ ನಡೆಯಲಿದೆ ಎಂದರು.