ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಸಾಧನೆ ಮಾಡುವುದರ ಮೂಲಕ ಶಿಕ್ಷಣವನ್ನೇ ಆಸ್ತಿಯನ್ನಾಗಿ ಮಾಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಮೈಸೂರು ಜಿಲ್ಲಾ ಘಟಕದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು