ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಿದ್ದೇನೆ, ತನಿಖೆ ನಡೆಸಿ ಎನ್ನುವ ಅನಾಮಿಕ ವ್ಯಕ್ತಿ ಯಾರು ಎಂಬ ಬಗ್ಗೆ ಯಾರಿಗೂ ಮಾಹಿತಿ ಇಲ್ಲ. ನಿರ್ದಿಷ್ಟ ಸ್ಥಳಗಳಲ್ಲಿ ಅನಾಥ ಮೃತದೇಹ ಹೂತಿದ್ದಾಗಿ ಒಂದು ತಿಂಗಳ ಹಿಂದೆ ಹೇಳಿಕೆ ನೀಡಿದ್ದು, ಅದರಂತೆ ಎಸ್‌ಐಟಿ ಮಾರ್ಗದರ್ಶನದಲ್ಲಿ ಉತ್ಖನನ ನಡೆಯುತ್ತಿದೆ. ಆದರೆ ಆತನ ಆರೋಪದಲ್ಲಿ ಹುರುಳು ಇದ್ದಂತೆ ಕಾಣುತ್ತಿಲ್ಲ. ಆತ ಯಾವ ಆಧಾರದಲ್ಲಿ ಆರೋಪ ಮಾಡುತ್ತಿದ್ದಾನೆ ಎಂಬುದು ಸ್ಪಷ್ಟವಾಗಬೇಕು. ಹೀಗಾಗಿ ಆತನ ಮಂಪರು ಪರೀಕ್ಷೆ ನಡೆಸಬೇಕು ಎಂದು ಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.