ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದ ಹತ್ತಿರ ನಾಡ ದೇವಿ ಪ್ರತಿಷ್ಠಾಪನ ಸ್ಥಳಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಸೋಮವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಜನತೆಗೆ ಒಳ್ಳೆಯದಾಗಲಿ ರೈತರ ಬದುಕು ಹಸನಾಗಲಿ ಎಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ವರ್ಷ ಸಿದ್ದೇಶ್ವರ ದೇವಸ್ಥಾನದ ನಾಡ ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದೇನೆ ಎಂದು ಹೇಳಿದರು. ಈ ವೇಳೆ ಸಾರ್ವಜನಿಕರು ಮಹಿಳೆಯರು ಭಕ್ತಾದಿಗಳು ಉಪಸ್ಥಿತರಿದ್ದರು.