ಆರೋಗ್ಯವೇ ಭಾಗ್ಯ” ಎಂಬ ಮಾತಿನಂತೆ ಗ್ರಾಮೀಣ ಜನತೆಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು. ತಾಲ್ಲೂಕಿನ ಐಮಂಗಲ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ, ಆಸ್ಪತ್ರೆಯ ಸೌಲಭ್ಯಗಳನ್ನು ವೀಕ್ಷಿಸಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಆಸ್ಪತ್ರೆಯ ಮೂಲಭೂತ ಸೌಲಭ್ಯಗಳನ್ನು ಇನ್ನಷ್ಟು ಬಲಪಡಿಸುವ ದಿಸೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂಬುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು,ವೈದ್ಯಾಧಿಕಾರಿಗಳು, ಸಾರ್ವಜನಿಕರು ಇದ್ದರು.