ಚಿತ್ರದುರ್ಗದಲ್ಲಿಂದು ಕಾಂಗ್ರೆಸ್ ನ ಜಿಲ್ಲಾ ಅಲ್ಪ ಸಂಖ್ಯಾತರ ವಿಭಾಗದ ವತಿಯಿಂದ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧ್ಯಕ್ಷರಾದ ಸೈಯ್ಯದ್ ಖುದ್ದೂಸ್ ಅವರ ನೇತೃತ್ವದಲ್ಲಿ ಓಟ್ ಚೋರ್ ಗದ್ದಿ ಚೋಡ್ ಆಂದೋಲನದ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಅಲ್ಪ ಸಂಖ್ಯಾತರ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಸೈಯದ್ ಖುದ್ದೂಸ್ ಹಾಗೂ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಂ ಕೆ ತಾಜ್ ಪೀರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಹಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.