ಈದ್-ಮಿಲಾದ್ ಹಾಗೂ ಗೌರಿ ಗಣೇಶ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು. ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದಾದ್ಯಂತ ಎಲ್ಲ ಏರಿಯಾಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಈಗಾಗಲೇ ಕಟ್ಟೆಚ್ಚರ ವಹಿಸಿದೆ.