ವಿವಿಧ ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳ ವಾರಸುದಾರ ಪತ್ತೆಗೆ ಮುಂದಾದ ಪೋಲಿಸರು ಚನ್ನಪಟ್ಟಣ- ಪುರ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಸುಮಾರು 25 ವಾಹನಗಳನ್ನು ವಶಪಡಿಸಿಕೊಂಡಿದ್ದು. ಅಮಾನತ್ತುಪಡಿಸಿಕೊಂಡ ದ್ವಿಚಕ್ರ ವಾಹನಗಳನ್ನು ಬಹಿರಂಗ ಹರಾಜು ಹಾಕಲು ನ್ಯಾಯಾಲಯದಿಂದ ಆದೇಶ ಬಂದಿರುವ ಹಿನ್ನೆಲೆಯಲ್ಲಿ, ಸದರಿ ವಾಹನಗಳ ಮಾಲೀಕರು ಯಾರಾದರೂ ಇದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಪುರಪೊಲೀಸ್ ಠಾಣೆಗೆ ಹಾಜರಾಗುವಂತೆ ಆರಕ್ಷಕ ಉಪನಿರೀಕ್ಷಕರು ತಮ್ಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.