ಕೂಡ್ಲಿಗೆರೆ ಗ್ರಾಮದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಮುಖ್ಯ ಬೀದಿಗಳಲ್ಲಿ ದೀಪದ ಅಲಂಕಾರ ಹಾಗೂ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ವಿಭಿನ್ನ ರೀತಿಯಲ್ಲಿ ಸುಬ್ರಮಣ್ಯ ಸ್ವಾಮಿಗೆ ಅಲಂಕಾರ ಮಾಡಲಾಗಿತ್ತು. ಸುತ್ತಮುತ್ತಲಿನ ಗ್ರಾಮಸ್ಥರು, ಕೂಡ್ಲಿಗೆರೆ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.