ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಶನಿವಾರ ಮಧ್ಯಾನ ದೇವದುರ್ಗ ಮತ್ತು ಅರಕೇರಾ ಮಂಡಲದ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ದೇವದುರ್ಗ ಪಟ್ಟಣದ ಜಹೀರುದ್ದಿನ್ ಪಾಷಾ ವೃತ್ತದಿಂದ ಪ್ರಮುಖ ಬೀದಿಗಳ ಮೂಲಕ ಪ್ರತಿಭಟನ ಪಾದಯಾತ್ರೆಯನ್ನು ನಡೆಸಿ ತಹಸಿಲ್ದಾರ್ ಕಚೇರಿ ಮುಂದೆ ತಮ್ಮ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಸರ್ಕಾರಕ್ಕೆ ಬರೆದ ಮನವಿಯನ್ನು ತಹಸೀಲ್ದಾರರ ಮೂಲಕ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎರಡು ಮಂಡಲದ ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.