ವಿಜಯಪುರ ನಗರದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತ ಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ವಿಶ್ವ ಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮೃತ ಯುವಕನ ಕುಟುಂಬವು ಕಡುಬಡತನದಲ್ಲಿದ್ದು ಕುಟುಂಬಕ್ಕೆ ಆಸರೆಯಾದ ಯುವಕ ಸಾವನಪ್ಪಿದ್ದು ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಹೀಗಾಗಿ ಕೂಡಲೇ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.