ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜೂಜಾಟದ ಮೇಲೆ ದಾಳಿ ನಡೆಸಿ, ರೂ 44,250 ನಗದು ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ 08 ಜನ ಆರೋಪಿತರ ವಿರುದ್ಧ 112 ಬಿ.ಎನ್.ಎಸ್ ಮತ್ತು 87 ಕೆ.ಪಿ ಆ್ಯಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಇದೇ ವೇಳೆ ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ, ರೂ 3,000 ನಗದು ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದು, 06 ಜನ ಆರೋಪಿತರ ವಿರುದ್ಧ 112 ಬಿಎನ್‌ಎಸ್ ಮತ್ತು 87 ಕೆ.ಪಿ ಆ್ಯಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಲಿ ಒಟ್ಟು 14 ಜನರನ್ನು ಬಂಧಿಸಲಾಗಿದೆ.