ನ್ಯಾಯಮೂರ್ತಿ ಡಾ| ನಾಗಮೋಹನ್ ದಾಸ್ ಅವರ ಅವೈಜ್ಞಾನಿಕ ಜಾತಿ ಸಮೀಕ್ಷಾ ವರದಿ ಹಾಗೂ ಒಳಮೀಸಲಾತಿ ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ತಾರತಮ್ಯ ನೀತಿಯನ್ನು ಖಂಡಿಸಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಅಖಿಲ ಕರ್ನಾಟಕ ಮೀಸಲಾತಿ ಸಂರಕ್ಷಣಾ ಸಮಿತಿ ಹಾಗೂ ಚಿತ್ರದುರ್ಗ ಜಿಲ್ಲಾ ಕೊಲಂಬೋ ಒಕ್ಕೂಟ ಇವರ ವತಿಯಿಂದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು