ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ಸುಮಾರು 84 ಮನೆಗಳ ತೆರವು ಮಾಡಿದನ್ನು ವಿರೋಧಿಸಿ ಸಂತ್ರಸ್ತರು ಸಿಂದಗಿ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಮಳೆಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ಸ್ಥಳಕ್ಕೆ ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮಾಜಿ ಶಾಸಕ ರಮೇಶ ಭೂಸನೂರು ಭೇಟಿ ನೀಡಿ ನೈತಿಕ ಬೆಂಬಲ ನೀಡಿದರು. ಸರ್ಕಾರ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತಹ ಕೆಲಸ ಮಾಡಬೇಕು, ಯಾವುದೇ ವ್ಯವಸ್ಥೆ ಕಲ್ಪಸದೆ ಏಕಾಏಕಿ ಮನೆ ತೇರು ಮಾಡಿದರಿಂದ ಜನರ ಬದುಕು ಬೀದಿಗೆ ಬಂದಿದೆ ಎಂದು ಆಕ್ರೋಶ ಹೊರ ಹಾಕಿದರು. ಕೂಡಲೆ ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಇಲ್ಲವಾದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.