ಕುಡಿದು ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಪತಿಯನ್ನ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ನಿಟ್ಟೆ ಗ್ರಾಮದ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರು ಶೇಖರ್ ಮೂಲ್ಯ 60 ವರ್ಷ ಎಂದು ಗುರುತಿಸಲಾಗಿದ್ದು, ಸದ್ಯ ಅವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆಗೆ ಯತ್ನಿಸಿದ ಆರೋಪಿ ಶೇಖರ್ ಮೂಲ್ಯರ ಪತ್ನಿ ಮಾಲತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ.