ಮುಂದಿನ ಜನ್ಮದಲ್ಲಿ ಮುಸ್ಲಿಂನಾಗಿ ಹುಟ್ಟುತ್ತೇನೆ ಎಂದು ಹೇಳಿರುವ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಮುಂದಿನ ಜನ್ಮ ಬೇಡ, ಈಗಲೇ ಮುಸ್ಲಿಂ ಧರ್ಮಕ್ಕೆ ಸೇರಿಕೊಳ್ಳಲಿ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಂಗಳವಾರ ಸಂಜೆ 5 ಗಂಟೆಗೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ, ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಮುಸ್ಲಿಂ ಓಲೈಕೆ ಮತ್ತು ತುಷ್ಠೀಕರಣದಿಂದಾಗಿ ಹಿಂದೂಗಳು ತಮ್ಮ ಹಬ್ಬಗಳ ಆಚರಣೆಗಳನ್ನು ಮಾಡುವುದೇ ಕಷ್ಟವಾಗಿದೆ ಎಂದರು