ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತು ಬಡಾವಣೆಯ ನಿವಾಸಿಗಳು ಮಹಾನಗರ ಪಾಲಿಕೆಗೆ ದೂರ ನೀಡಿದ ಹಿನ್ನೆಲೆ ಶುಕ್ರವಾರ ಮಧ್ಯಾನ 2ಗಂಟೆ ಸುಮಾರಿಗೆ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಡ್ರೈನೇಜ್ ಹೊಡೆದು ಬಡಾವಣೆಗಳಲ್ಲಿ ನೀರು ನುಗ್ಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಕೂಡಲೇ ಸಮಸ್ಯೆ ಬಗೆಹರಿಸಿ ಕೊಡುವಂತೆ ನಿವಾಸಿಗಳು ಮನವಿ ಮಾಡಿದರು. ಇನ್ನು ಆದಷ್ಟು ಬೇಗ ಸಮಸ್ಯೆ ಬಗೆಹರಿಸಿಕೊಡುವ ಭರವಸೆಯನ್ನು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಿಕೆ ನೀಡಿದರು.