ಮೈಕ್ರೋ ಫೈನಾನ್ಸ್ ಕಿರುಕುಳ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ (ವಾಸುದೇವ ಮೇಟಿ) ಬಣದಿಂದ ಪ್ರತಿಭಟನೆ ನಡೆಸಲಾಯಿತು. ಸೋಮವಾರ ದಾವಣಗೆರೆ ಜಿಲ್ಲೆಯ ಜಗಳೂರುಯ ಪಟ್ಟಣದ ತಾಲ್ಲೂಕು ಕಛೇರಿ ಮುಂಬಾಗ ಜಮಾಯಿಸಿದ ರೈತರು, ಮುತ್ತೂಟ್ ಫೈನಾನ್ಸ್ ದೌರ್ಜನ್ಯ, ಕಾನೂನು ಬಾಹಿರ ಬಡ್ಡಿ ವಸೂಲಿ ಖಂಡಿಸಿ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅವರಿಗೆ ಲಿಖಿತ ಮನವಿ ಸಲ್ಲಿಸಿದರು.