ಮೊಳಕಾಲ್ಮುರು:-ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಬದುಕಲು ಪೋಷಕಾಂಶಯುಕ್ತ ಆಹಾರ ಸೇವನೆ ಮಾಡುವುದು ಖಡ್ಡಾಯವಾಗಿ ಅವಶ್ಯಕತೆಯಿದೆ ಎಂದು ಸಿಡಿಪಿಒ ನವೀನ್ ಕುಮಾರ್ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾನೂನು ಸೇವಾ ಪ್ರಾಧಿಕಾರಗಳ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.