ವಿಜಯಪುರ ನಗರದಲ್ಲಿ ಶಂಕರಲಿಂಗ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಮಂಗಳವಾರ ಸಾಯಂಕಾಲ 5ಗಂಟೆ ಸುಮಾರಿಗೆ ಭಾಗಿಯಾಗಿದ್ದರು. ಮೊದಲಿಗೆ ಗಣೇಶನಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ನಂತರ ಭವ್ಯ ವಾರ್ಕರಿ ನೃತ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಣೇಶ ಮಹಾಮಂಡಳಿಯ ಪದಾಧಿಕಾರಿಗಳು ಹಾಗೂ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಮುಂದಿನ ವರ್ಷದಿಂದ ಗಣೇಶ ಕಾರ್ಯಕ್ರಮಕ್ಕೆ 5 ಲಕ್ಷ ರೂಪಾಯಿ ನೀಡುತ್ತೇನೆ ಎಂದು ಹೇಳಿದರು.