ತೋಟದಲ್ಲಿ ಬಿದ್ದಿದ ತೆಂಗಿನಕಾಯಿಯನ್ನು ತೆಗೆದುಕೊಂಡಿದ್ದಕ್ಕೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಪ್ರಕರಣ. ಗಂಭೀರವಾಗಿ ಗಾಯಗೊಂಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಎಸ್ ಬಿದರೆ ಗೊಲ್ಲರಹಟ್ಟಿ ಗ್ರಾಮದ ನಿವಾಸಿ 37 ವರ್ಷದ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು. ದೂರು ನೀಡಲು ಹೋದ ಸಂದರ್ಭದಲ್ಲಿ ಸಖರಾಯಪಟ್ಟಣ ಠಾಣೆಯ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿ ಎ ಎಸ್ ಪಿ ಜಯಕುಮಾರ್ ಮುಂದೆ ಸ್ಥಳೀಯರು ಅಳಲನ್ನು ತೋಡಿಕೊಂಡರು.