ಹಾಸನ : ಸಹಕಾರ ಸಂಘಗಳ ಸ್ಥಾಪನೆಯಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗದ ಜೊತೆಗೆ ಆರ್ಥಿಕ ಬಲವರ್ಧನೆಯು ಸಾಧ್ಯ ಎಂದು ಶಾಸಕ ಸ್ವರೂಪ ಪ್ರಕಾಶ್ ಹೇಳಿದ್ದಾರೆ.ಹಾಸನ ತಾಲೂಕಿನ ನಂಜೆ ದೇವರ ಕಾವಲ್ ಗ್ರಾಮದಲ್ಲಿ ಇಂದು ಸಮುದಾಯ ಭವನ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ಹಾಲು ಉತ್ಪಾದನೆಯಲ್ಲಿ ಹಾಸನ ಹಾಲು ಒಕ್ಕೂಟ ರಾಜ್ಯದಲ್ಲಿ ಎರಡನೇ ಸ್ಥಾನ ಗಳಿಸಿದೆ ಇದಕ್ಕೆ ಹಲವರ ಕೊಡುಗೆ ಇದೆ ಎಂದರು. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪರಿಕಲ್ಪನೆಗೆ ಅನುಗುಣವಾಗಿ ಹಾಸನದಲ್ಲಿ ಕ್ಷೀರ ಉತ್ಪನ್ನ ಹೆಚ್ಚಾಗುತ್ತಿದೆ, ಇದರಿಂದ ಸಾವಿರಾರು ಮಹಿಳೆಯರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದರು.