ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಕೈ ಬಿಟ್ಟಿಲ್ಲ ಲಿಂಗಾಯತ ಧರ್ಮದ ಸಂಸ್ಕೃತಿ ಹಾಗೂ ಆಚಾರ ವಿಚಾರಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವಂತಹ ಕೆಲಸ ನಾವು ಮಾಡುತ್ತೇವೆ. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಕುರಿತು ಈಗಾಗಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪ್ರಸ್ತಾವನೆಯಲ್ಲಿ ಲಿಂಗಾಯತ ಧರ್ಮ ಅಲ್ಪಸಂಖ್ಯಾತ ಧರ್ಮ ಎಂದು ಪರಿಗಣಿಸಬೇಕು ಎಂದು ನಮ್ಮ ಹೋರಾಟ ನಿರಂತರವಾಗಿರುತ್ತೆ ಎಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಲಿಂಗಾಯತ ಮಹಾಸಭದ ಕಾರ್ಯದರ್ಶಿ ಜಾಮ್ದಾರ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು.