ಯಾದಗಿರಿ ಜಿಲ್ಲೆಯ ಸುರಪುರ ನಗರದ ಅಂಬೇಡ್ಕರ್ ವೃತ್ತದ ಹಿಂಭಾಗದಲ್ಲಿನ ಸರ್ವೆ ನಂಬರ್ 7/1ರಲ್ಲಿಯ ಖಾರಿ ಖಾತ ಭೂಮಿಯನ್ನು ಮಂಜೂರು ಮಾಡುವಂತೆ ಅಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಘಟಕದಿಂದ ಶನಿವಾರ ಮಧ್ಯಾಹ್ನ ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಭಾಗವಹಿಸಿದ ಅನೇಕ ಮುಖಂಡರು ಮಾತನಾಡಿ, ಈ ಭೂಮಿ ಮಂಜೂರು ಮಾಡಿದಲ್ಲಿ ಅಂಬೇಡ್ಕರ್ ಗ್ರಂಥಾಲಯ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ಅನುಕೂಲವಾಗಲಿದೆ ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಮುಖಂಡರಾದ ರಾಮಣ್ಣ ಕಲ್ಲದೇವನಹಳ್ಳಿ,ನಾಗಣ್ಣ ಬಡಿಗೇರ ,ಮಾಳಪ್ಪ ಕಿರದಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.