ಎಲ್‌ಬಿಎಸ್ ನಗರ ಸೇರಿದಂತೆ ಇತರೆಡೆ ಇರುವ ಖಾಸಗಿ ಆಸ್ಪತ್ರೆಗಳ ಮೇಲೆ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು. ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು ಮಾತನಾಡಿ, ಸೆಪ್ಟೆಂಬರ್ 10ರಂದು ಮಧ್ಯಾಹ್ನ 2 ಗಂಟೆಗೆ 11 ಖಾಸಗಿ ಆಸ್ಪತ್ರೆಗಳ ಮೇಲೆ ದಾಳಿ ಮಾಡಲಾಗಿದೆ. 11 ಆಸ್ಪತ್ರೆಗಳ ಪೈಕಿ ಕೆಲವು ಆಸ್ಪತ್ರೆಗಳು ಕೆಪಿಎಂಸಿ ಕಾಯಿದೆಯನುಸಾರ ನೋಂದಣಿ ಮಾಡದೇ ಇರುವುದು ಕಂಡು ಬಂದಿದ್ದು, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು. ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯಿದೆ (ಕೆಪಿಎಂಇ) ನಿಯಮಗಳು ಉಲ್ಲಂಘಿಸಿದ ಖಾಸಗಿ ವೈದ್ಯಕೀಯ ಸಂಸ್ಥೆ, ಕ್ಲಿನಿಕ್‌ಗಳ ವಿರ